ADVERTISEMENT

ಅಥಣಿ: ಸರ್ಕಾರಿ ಆಸ್ಪತ್ರೆಗೆ ಸತೀಶ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 16:52 IST
Last Updated 14 ಜೂನ್ 2021, 16:52 IST
ಅಥಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮುಖಂಡ ಧರೆಪ್ಪ ಠಕ್ಕಣ್ಣವರ ನೀಡಿದ ಆಹಾರ ಪೊಟ್ಟಣಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ವಿತರಿಸಿದರು
ಅಥಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮುಖಂಡ ಧರೆಪ್ಪ ಠಕ್ಕಣ್ಣವರ ನೀಡಿದ ಆಹಾರ ಪೊಟ್ಟಣಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ವಿತರಿಸಿದರು   

ಅಥಣಿ: ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ಭೇಟಿ ನೀಡಿ, ವೈದ್ಯಾಧಿಕಾರಿ ಜೊತೆ ಚರ್ಚಿಸಿದರು. ರೋಗಿಗಳ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಅವರು, ‘ವಿರೋಧ ಪಕ್ಷವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಏನೇನು ಕೊರತೆ ಇದೆ, ಸೋಂಕಿತರಿಗೆ ಹೇಗೆ ಆರೈಕೆ ಮಾಡಿದ್ದಾರೆ ಎನ್ನುವುದರ ಕುರಿತು ಸರ್ಕಾರದ ಗಮನ ಸೆಳೆಯುತ್ತಿದ್ದೇವೆ. ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತಿದ್ದೇವೆ ಎಂದರು.‌

‘ಕೋವಿಡ್ 3ನೇ ಅಲೆ ನಿರ್ವಹಿಸುವ ಕುರಿತು ಸಲಹೆಯನ್ನೂ ನೀಡುತ್ತಿದ್ದೇವೆ’ ಎಂದು ಹೇಳಿದರು.

ADVERTISEMENT

ಪಕ್ಷದ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷಲಕ್ಷ್ಮಣರಾವ ಚಿಂಗಳೆ, ಮುಖಂಡರಾದ ವೀರಕುಮಾರ ಪಾಟೀಲ, ಗಜಾನನ ಮಂಗಸೂಳಿ, ಎಸ್.ಕೆ. ಬುಟಾಳೆ, ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ರವಿ ಬಡಕಂಬಿ, ಸಿದ್ದಾರ್ಥ ಸಿಂಗೆ, ಶ್ರೀಕಾಂತ ಪೂಜಾರಿ, ಅಸ್ಲಂ ನಾಲಬಂದ, ಸುನೀಲ ಸಂಕ ಇದ್ದರು.

ಪ್ರತಿಭಟನೆ: ತೈಲ ದರ ಏರಿಕೆ ಖಂಡಿಸಿ ಪಕ್ಷದ ಮುಖಂಡ ಗಜಾನನ ಮಂಗಸೂಳಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.