ADVERTISEMENT

ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿ‌ ಶಿವಲಿಂಗ ಪಾಟೀಲ ಬಂಧನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 4:19 IST
Last Updated 17 ಫೆಬ್ರುವರಿ 2021, 4:19 IST
ಶಿವಲಿಂಗ ಪಾಟೀಲ
ಶಿವಲಿಂಗ ಪಾಟೀಲ   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಈತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಒಂದು ವರ್ಷದ ಹಿಂದೆ ಸೆಂಟರ್ ಮುಚ್ಚಿದ್ದ. ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ಬಂಧಿಸಿರುವ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುತ್ತಿದ್ದ. ಪರೀಕ್ಷೆಯ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ನೀಡುತ್ತಿದ್ದ’ ಎಂದು ಅಪರಾಧ ವಿಭಾಗದ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.