ADVERTISEMENT

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಮೂವರು ಯುವತಿಯರೂ ಸೇರಿ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 16:31 IST
Last Updated 3 ಜನವರಿ 2023, 16:31 IST
ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಆರೋಪಿಗಳು ಬಳಸಿದ ಎಲೆಕ್ಟ್ರಾನಿಕ್‌ ಉಪಕರಣಗಳು
ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಆರೋಪಿಗಳು ಬಳಸಿದ ಎಲೆಕ್ಟ್ರಾನಿಕ್‌ ಉಪಕರಣಗಳು   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಮಂಗಳವಾರ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರೊಂದಿಗೆ ಬಂಧಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಬಂಧಿತರಲ್ಲಿ ಮೂವರು ಯುವತಿಯರೂ ಇದ್ದಾರೆ.

ಗೋಕಾಕ ತಾಲ್ಲೂಕು ಮರಡಿಮಠದ ವೈಷ್ಣವಿ ಬಾಳಪ್ಪ ಸನದಿ (21), ಉಪ್ಪಾರಟ್ಟಿಯ ಸುಧಾರಾಣಿ ಹೂವಪ್ಪ ಅರಬಾಂವಿ (24), ತುಕ್ಕಾನಟ್ಟಿಯ ಐಶ್ವರ್ಯ ರಾಮಚಂದ್ರ ಬಾಗೇವಾಡಿ (22) ಹಾಗೂ ಬಗರನಾಳದ ಬಸವರಾಜ ರಾಮಪ್ಪ ಹಾವಡಿ (27) ಬಂಧಿತರು.

ಇವರೆಲ್ಲರೂ ಗೋಕಾಕ ಪರೀಕ್ಷಾ ಕೇಂದ್ರದಲ್ಲಿ ಮೈಕ್ರೊಚಿಪ್‌, ಮೊಬೈಲ್‌ ಹಾಗೂ ಇತರ ಎಲೆಕ್ಟ್ರಾನಿಕ್‌ ಡಿವೈಸ್‌ಗಳನ್ನು ಬಳಸಿ ಪರೀಕ್ಷೆ ಬರೆದಿದ್ದರು. ಆರೋಪಿಗಳಿಂದ ಅಕ್ರಮಕ್ಕೆ ಬಳಸಿದ ಎಲ್ಲ ಸಾಮಗ್ರಿಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ADVERTISEMENT

ಎಲ್ಲರನ್ನೂ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.