ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಶುಕ್ರವಾರ ಮತ್ತೊಬ್ಬ ಅಭ್ಯರ್ಥಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 52ಕ್ಕೆ ಏರಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡದ ಶಿವರಾಜ ಬಾಗಪ್ಪ ಕಾರಟಗಿ (25) ಬಂಧಿತ. ಈತ ಎಲೆಕ್ಟ್ರಾನಿಕ್ ಉಪಕರಣ ಹಾಗೂ ಮೈಕ್ರೊಚಿಪ್ ಬಳಸಿ ಪರೀಕ್ಷೆ ಬರೆದಿದ್ದ. ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.