ADVERTISEMENT

ಕೆಪಿಟಿಸಿಎಲ್‌ ಅಕ್ರಮ: ಮತ್ತೊಬ್ಬ ಆರೋ‍ಪಿ ಬಂಧನ

ಬಂಧಿತರ ಸಂಖ್ಯೆ 35ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 18:54 IST
Last Updated 14 ಡಿಸೆಂಬರ್ 2022, 18:54 IST
ಸೋಮನಗೌಡ
ಸೋಮನಗೌಡ   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿ ದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 35ಕ್ಕೆ ಏರಿದೆ.

ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಸೋಮನಗೌಡ ಶಂಕರಗೌಡ ಪಾಟೀಲ (36) ಬಂಧಿತ. ‘ಗದಗ ನಗರದ ಮುನ್ಸಿಪಲ್‌ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ದಿಂದ ಪ್ರಶ್ನೆ ಪತ್ರಿಕೆಯನ್ನು ಬಹಿರಂಗ ಮಾಡುವಲ್ಲಿ ಈ ಆರೋಪಿಯ ಪಾತ್ರ ಪ್ರಮುಖ ವಾಗಿದೆ’ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT