ADVERTISEMENT

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

ಪ್ರಮುಖ ಆರೋಪಿ ಸಿಐಡಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 11:45 IST
Last Updated 18 ಅಕ್ಟೋಬರ್ 2022, 11:45 IST
ಕೆಪಿಟಿಸಿಎಲ್‌
ಕೆಪಿಟಿಸಿಎಲ್‌   

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ಸಂಜೀವ ಭಂಡಾರಿ, ಜಾಮೀನು ಪಡೆದು ಹೊರಬರುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳು ಬಂಧಿಸಿದರು.

ಈ ಪ್ರಕರಣದ 'ಕಿಂಗ್ ಪಿನ್' ಸಂಜೀವ ಅವರನ್ನು ಸೆ.3ರಂದು ಬಂಧಿಸಲಾಗಿತ್ತು. ಸಂಜೀವ ಸೇರಿದಂತೆ ಎಲ್ಲ 20 ಆರೋಪಿಗಳೂ ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದರು. ಸೋಮವಾರ ಇವರ ಅರ್ಜಿ ವಿಚಾರಣೆ ನಡೆಸಿದ ಗೋಕಾಕದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಂಜೀವ ಜಾಮೀನು ಪಡೆದು ಜೈಲಿನಿಂದ ಹೊರ ಬರುತ್ತಿದ್ದಂತೆ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಯನ್ನು ಆರು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

ADVERTISEMENT

2021ರಲ್ಲಿ ನಡೆದ ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲೂ ಸಂಜೀವ ಅಕ್ರಮ ಎಸಗಿರುವ ಆರೋಪದಲ್ಲಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದು ಮತ್ತೆ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಕೂಡ ಅಭ್ಯರ್ಥಿಗಳಿಗೆ ಸ್ಮಾರ್ಟ್ ವಾಚ್ ನೀಡಿ ಅಕ್ರಮ ಎಸಗುವ ಡೀಲ್ ಮಾಡಿದ ಆರೋಪ ಅವರ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.