ADVERTISEMENT

ರಾಜ್ಯಕ್ಕೆ ಹರಿದುಬರುತ್ತಿದೆ 1 ಲಕ್ಷ ಕ್ಯುಸೆಕ್‌ ನೀರು

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 13:10 IST
Last Updated 12 ಜುಲೈ 2019, 13:10 IST

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ರಭಸ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾ ಹಾಗೂ ಉಪನದಿಗಳ ಮೂಲಕ ರಾಜ್ಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣವು 1 ಲಕ್ಷ ಕ್ಯುಸೆಕ್‌ ಮೀರಿದೆ.

ಕೃಷ್ಣಾ ನದಿಯ ಉಗಮಸ್ಥಳವಾದ ಮಹಾಬಳೇಶ್ವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಜಾಪುರ ಬ್ಯಾರೇಜ್‌ ಮೂಲಕ 76,407 ಕ್ಯುಸೆಕ್‌ ಹಾಗೂ ಅದರ ಉಪನದಿಯಾದ ದೂಧ್‌ಗಂಗಾ ಮೂಲಕ 23,926 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಮೂಲಕ ರಾಜ್ಯ ಪ್ರವೇಶಿಸಿದೆ.

ಜಿಲ್ಲೆಯ ಬೆಳಗಾವಿ, ಖಾನಾಪುರದಲ್ಲಿ ಶುಕ್ರವಾರ ಮಳೆಯ ರಭಸ ಕಡಿಮೆಯಾಗಿದೆ. ಖಾನಾಪುರ ತಾಲ್ಲೂಕಿನ ಹಿಂಡಲಗಿ, ಚಿಕ್ಕಮುನವಳ್ಳಿ, ಇಟಗಿ, ಜೈನಕೊಪ್ಪ, ಲಕ್ಕಬೈಲ, ಬಲೋಗಾ ಹಾಗೂ ಹಿತ್ತಲಹೊಂಡದಲ್ಲಿ ತಲಾ ಒಂದೊಂದು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.