ADVERTISEMENT

ಅಕಾಲಿಕ ಮಳೆ: ಕೃಷ್ಣಾ ನದಿಗಳಲ್ಲಿ 4 ಅಡಿ ಏರಿದ ನೀರು

​ಪ್ರಜಾವಾಣಿ ವಾರ್ತೆ
Published 23 ಮೇ 2025, 16:17 IST
Last Updated 23 ಮೇ 2025, 16:17 IST
<div class="paragraphs"><p>ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ– ಯಡೂರು ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಕಂಡುಬಂದ ಏರಿಕೆ</p></div>

ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ– ಯಡೂರು ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಕಂಡುಬಂದ ಏರಿಕೆ

   

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಳೆದೊಂದು ವಾರದಿಂದ ಮಳೆ ಬೀಳುತ್ತಿರುವ ಪರಿಣಾಮವಾಗಿ ಶುಕ್ರವಾರ ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ, ಪಂಚಗಂಗಾ ಸೇರಿದಂತೆ ವಿವಿಧ ನದಿಗಳಲ್ಲಿ 4 ಅಡಿಗಿಂತಲೂ ಹೆಚ್ಚು ನೀರು ಏರಿಕೆಯಾಗಿದೆ.

ಮಹಾರಾಷ್ಟ್ರದ ಕೊಲ್ಹಾಫುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿದ್ದು, ಅಲ್ಲದೇ, ಚಿಕ್ಕೋಡಿ ಉಪ ವಿಭಾಗದ ನಿಪ್ಪಾಣಿ, ಚಿಕ್ಕೋಡಿ, ಕಾಗವಾಡ ಮುಂತಾದ ಕಡೆಗೆ ಮಳೆ ಬಿದ್ದಿದ್ದರಿಂದ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ 4 ಅಡಿಯಷ್ಟು ಏರಿಕೆ ಕಂಡು ಬಂದಿದೆ.

ADVERTISEMENT

ಕಳೆದ ಎರಡು ತಿಂಗಳಿನಿಂದ ನೀರಿಲ್ಲದೇ ಬರಿದಾಗಿದ್ದ ಕೃಷ್ಣಾ ಹಾಗೂ ಉಪನದಿಗಳಲ್ಲಿ ನೀರಿನ ಹರಿವಿಕೆ ಅಕಾಲಿಕ ಮಳೆಯಿಂದ ಹೆಚ್ಚಾಗಿದ್ದರಿಂದ ಬತ್ತಿ ಹೋಗಿದ್ದ ನದಿಗಳಿಗೆ ಜೀವಜಲದಿಂದ ಜೀವಕಳೆ ಬಂದಿದ್ದು, ನದಿ ತೀರದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಜನ –ಜಾನುವರುಗಳ ಕುಡಿಯುವ ನೀರಿಗೆ ಅನುಕೂಲವಾಗಿದ್ದು, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಹಾಗೂ ನದಿ ತೀರದ ವಿವಿಧ ಜಾಕ್‍ವೆಲ್‌ನಿಂದ ನೀರು ಪೂರೈಕೆಗೆ ಅನುಕೂಲವಾಗಿದೆ ಎಂದು ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.