ADVERTISEMENT

ಬೆಳಗಾವಿ | ಕೃಷ್ಣಾ ನದಿಯಲ್ಲಿ ತೇಲಿಹೋದ ಮಹಿಳೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 15:17 IST
Last Updated 17 ಜೂನ್ 2025, 15:17 IST
<div class="paragraphs"><p>ಸಂಗೀತಾ ಶಿವಾಜಿ ಮಾಂಜರೇಕರ</p></div>

ಸಂಗೀತಾ ಶಿವಾಜಿ ಮಾಂಜರೇಕರ

   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ (41) ಅವರು ನೀರಿನ ಸೆಳೆತಕ್ಕೆ ಸಿಕ್ಕಿ ತೇಲಿಹೋಗಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಬೋಟ್‌ ಮೂಲಕ ಶೋಧ ನಡೆಸಿದರೂ ಅವರ ಸುಳಿಸುವ ಸಿಕ್ಕಿಲ್ಲ. ಕತ್ತಲಾಗಿದ್ದರಿಂದ ಶೋಧಕಾರ್ಯ ನಿಲ್ಲಿಸಲಾಗಿದ್ದು, ಬುಧವಾರ ಮತ್ತೆ ಮುಂದುವರಿಸಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ADVERTISEMENT

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ಚಿದಂಬರ ಕುಲಕರ್ಣಿ ಭೇಟಿ ನೀಡಿದರು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.