ADVERTISEMENT

ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಇಳಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 9:31 IST
Last Updated 23 ಆಗಸ್ಟ್ 2020, 9:31 IST

ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ರಾಜಾಪೂರ ಬ್ಯಾರೇಜ್‌ನಿಂದ 1.23 ಲಕ್ಷ ಕ್ಯುಸೆಕ್ ಹಾಗೂ ದೂಧ್‌ಗಂಗಾ ನದಿಯಿಂದ 25,344 ಕ್ಯುಸೆಕ್‌ ಸೇರಿ 1.49 ಲಕ್ಷ ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರಿಕೊಳ್ಳುತ್ತಿದೆ.

ನದಿಯಲ್ಲಿ ಕ್ರಮೇಣ ನೀರಿನ ಪ್ರಮಾಣ ಇಳಿಕೆ ಆಗುತ್ತಿರುವುದರಿಂದ ತೀರದ ಗ್ರಾಮಗಳಲ್ಲಿ ನೆರೆ ಪರಿಸ್ಥಿತಿಯ ಆತಂಕವೂ ಕಡಿಮೆಯಾಗಿದೆ.

ಅಂತೆಯೇ ಘಟಪ್ರಭಾ ಜಲಾಶಯದಿಂದ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಗಣನೀಯವಾಗಿ ಇಳಿಕೆಯಾಗಿದೆ. ಭಾನುವಾರ 20,820 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿತ್ತು. ಮಲಪ್ರಭಾ ಜಲಾಶಯದಿಂದ ಶನಿವಾರ 10ಸಾವಿರ ಕ್ಯುಸೆಕ್‌ ನೀರು ಹೊರಬಿಟ್ಟಿದ್ದರಿಂದ ಮುನವಳ್ಳಿಯ ಹಳೆಯ ಸೇತುವೆ ಮತ್ತೆ ಮುಳುಗಡೆಯಾಗಿತ್ತು. ಭಾನುವಾರ 8,339 ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಯಿತು.

ADVERTISEMENT

ನಗರದಲ್ಲಿ ಬಿಟ್ಟೂ ಬಿಟ್ಟು ಕೆಲ ಕಾಲ ಜೋರು ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.