ADVERTISEMENT

ಪೀರನವಾಡಿಗೆ ಈಶ್ವರಪ್ಪ ಭೇಟಿ 29ರಂದು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 9:29 IST
Last Updated 26 ಆಗಸ್ಟ್ 2020, 9:29 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಬೆಳಗಾವಿ: ತಾಲ್ಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಎಂದು ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳವರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಅವರು ಆ.29ರಂದು ಅಲ್ಲಿಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 9.45ಕ್ಕೆ ಪೀರನವಾಡಿ ಭೇಟಿ ನೀಡಿದ ನಂತರ ಜಿಲ್ಲಾ ‍ಪಂಚಾಯಿತಿಯಲ್ಲಿ ಅಧಿಕಾರಗಳ ಸಭೆ ನಡೆಸಲಿದ್ದಾರೆ.

ಅಲ್ಲಿ ರಾಯಣ್ಣನ ಜಯಂತಿ ದಿನವಾದ ಆ.15ರಂದು ಪ್ರತಿಮೆ ಸ್ಥಾಪನೆಗೆ ಅಭಿಮಾನಿಗಳು ಮುಂದಾಗಿದ್ದರು. ಆದರೆ, ಪೊಲೀಸರು ಅವಕಾಶ ಕೊಟ್ಟಿರಲಿಲ್ಲ ಮತ್ತು ಪ್ರತಿಮೆಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಪೊಲೀಸರಿಗೆ ಸೂಚಿಸಿದ್ದಾರೆ. ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ್ದರು. ಇದಾದ ಬೆನ್ನಲ್ಲೇ ಈಶ್ವರಪ್ಪ ಭೇಟಿ ಕೊಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.