ADVERTISEMENT

‘ನೀಲಿ ಪ್ರಿಯ’ ಲಕ್ಷ್ಮಣ ಸವದಿಗೆ ಧಿಕ್ಕಾರ ಎಂದಿದ್ದೇಕೆ?

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 12:04 IST
Last Updated 11 ಡಿಸೆಂಬರ್ 2020, 12:04 IST
ಪ್ರತಿಭಟನೆಯಲ್ಲಿ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು
ಪ್ರತಿಭಟನೆಯಲ್ಲಿ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು   

ಬೆಳಗಾವಿ: ಇಲ್ಲಿನ ಕೇಂದ್ರ ಬಸ್‌ ನಿಲ್ದಾಣದಲ್ಲಿ ಸಾರಿಗೆ ನೌಕರರು ಕೆಲಸದಿಂದ ದೂರ ಉಳಿದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಕರವೇ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಬೆಂಬಲ ವ್ಯಕ್ತ‍ಪಡಿಸಿದರು.

ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ವಿರುದ್ಧ ತವರಿನಲ್ಲೂ ತೀವ್ರ ಆಕ್ರೋಶ ವ್ಯಕ್ತವಾಯಿತು. ಸಂಘಟನೆಯ ಅಧ್ಯಕ್ಷ ಮಹಾಂತೇಶ ರಣಗಟ್ಟಿಮಠ ‘ನೀಲಿ ಪ್ರಿಯ ಲಕ್ಷ್ಮಣ ಸವದಿ’ಗೆ ಧಿಕ್ಕಾರ ಎಂದು ಕೂಗಿದರು. ಅದನ್ನು ಕಾರ್ಯಕರ್ತರು ಹಾಗೂ ನೌಕರರು ಬೆಂಬಲಿಸಿ ಸಚಿವರ ವಿರುದ್ಧ ಧಿಕ್ಕಾರ ಮೊಳಗಿಸಿದರು.

ನೌಕರರು ಪ್ರತಿಭಟನಾ ಸ್ಥಳದಲ್ಲೇ ಮಧ್ಯಾಹ್ನದ ಊಟ ಮಾಡಿದರು. ಕೆಲವು ಪುರುಷ ನೌಕರರು ಹೊಟ್ಟೆ ಮೇಲೆ ಕಲ್ಲು ಇಟ್ಟುಕೊಂಡು ಸರ್ಕಾರ ನಮ್ಮ ಹೊಟ್ಟೆ ಮೇಲೆ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಂಡಕ್ಟರ್‌ಗಳು ಒಮ್ಮೆಲೇ ಸೀಟಿ ಊದುವ ಮೂಲಕ ಗಮನಸೆಳೆದರು. ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವವರೆಗೂ ಮುಷ್ಕರ ಕೈ ಬಿಡುವುದಿಲ್ಲ ಎಂದು ನೌಕರರು ಪಟ್ಟು ಹಿಡಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.