ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮೀಣ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ (ನಿರ್ಬಂಧಿತ) ಪ್ರದೇಶದಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಬುಧವಾರ ಆದೇಶ ಹೊರಡಿಸಿದ್ದಾರೆ.
ಅಲ್ಲಿನ ಐವರಿಗೆ ಕೋವಿಡ್–19 ಸೋಂಕು ತಗುಲಿತ್ತು. ಅವರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದವರ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಹೀಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ‘ನಿರ್ಬಂಧಿತ ಪ್ರದೇಶ’ದಿಂದ ಬಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಕುಡಚಿ ಪಟ್ಟಣವನ್ನು ಕಂಟೈನ್ಮೆಂಟ್ ಝೋನ್‌ನಿಂದ ಮುಕ್ತಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.