ಬೆಳಗಾವಿ: ಪ್ರಯಾಗರಾಜ್‌ನಲ್ಲಿ ಮೃತಪಟ್ಟ ನಾಲ್ವರ ಶವಗಳನ್ನೂ ಬೆಳಗಾವಿಗೆ ತಂದು ಬಿಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಅವರು, ಮರಣೋತ್ತರ ಪರೀಕ್ಷೆ ನಡೆಸದೇ ಏರ್ ಲಿಫ್ಟ್ ಮಾಡಲು ನಿಯಮ ಅಡ್ಡಿಯಾದ ಕಾರಣ, ದೆಹಲಿಯ ಆಸ್ಪತ್ರೆಯಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಅಲ್ಲಿ ವಿಮಾನಗಳ ಸಮಯಕ್ಕೆ ಹೊಂದಾಣಿಕೆ ಆಗಲಿಲ್ಲ. ಉತ್ತರಪ್ರದೇಶ ಹಾಗೂ ದೆಹಲಿ ಪೊಲೀಸರು ನೀಡಿದ ಪ್ರಮಾಣ ಪತ್ರಗಳ ಆಧಾರದ ಮೇಲೆ ಶವಗಳನ್ನು ಏರ್ ಲಿಫ್ಟ್ ಮಾಡಲು ಸಾಧ್ಯವಾಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತ ವತಿಯಿಂದ ಶವ ಪಡೆದು, ಗೌರವ ಸಲ್ಲಿಸಲಾಗುವುದು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಗಳಿಗೆ ಹಸ್ತಾಂತರ ಮಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.