ADVERTISEMENT

ರಾಜ್ಯೋತ್ಸವ: ಕುಂದಾನಗರಿ ಸಜ್ಜು

ಗಡಿನಾಡಿನಲ್ಲಿ ಹಬ್ಬದ ವಾತಾವರಣ, ರಾರಾಜಿಸುತ್ತಿರುವ ಕನ್ನಡ ಬಾವುಟಗಳು

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 22:33 IST
Last Updated 31 ಅಕ್ಟೋಬರ್ 2022, 22:33 IST
ಬೆಳಗಾವಿಯ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದಲ್ಲಿ ಸೋಮವಾರ ಮಹಿಳೆಯರು ಹೋಳಿಗೆ ಸಿದ್ಧಪಡಿಸುತ್ತಿರುವುದನ್ನು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವೀಕ್ಷಿಸಿದರು/ ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದಲ್ಲಿ ಸೋಮವಾರ ಮಹಿಳೆಯರು ಹೋಳಿಗೆ ಸಿದ್ಧಪಡಿಸುತ್ತಿರುವುದನ್ನು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವೀಕ್ಷಿಸಿದರು/ ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ   

ಬೆಳಗಾವಿ: ‘ಬೆಳಕಿನ ಹಬ್ಬ’ ದೀಪಾವಳಿ ಬೆನ್ನಲ್ಲೇ, ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕುಂದಾನಗರಿ ಸಿಂಗಾರಗೊಂಡಿದೆ. ನ.1ರಂದು ನಡೆಯಲಿರುವ ಕನ್ನಡೋತ್ಸವಕ್ಕೆ ಸಾಕ್ಷಿಯಾಗಲು ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನರ ದಂಡು ಸೋಮವಾರವೇ ಬೆಳಗಾವಿಯತ್ತ ಮುಖಮಾಡಿದೆ.

ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ನಾಡಧ್ವಜಗಳು ಮತ್ತು ಸ್ವಾಗತ ಕಮಾನುಗಳು ರಾರಾಜಿಸುತ್ತಿವೆ. ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಕನ್ನಡ ಪರ ಸಂಘಟನೆಗಳು ಅಲ್ಲಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸಿವೆ.

ಇದೇ ಮೊದಲ ಸಲ ರಾಜ್ಯಮಟ್ಟದಲ್ಲಿ ಆಚರಿಸಲಾದ ‘ಕಿತ್ತೂರು ಉತ್ಸವ’ ಅಂಗವಾಗಿ ಇಲ್ಲಿನ ಪ್ರಮುಖ ವೃತ್ತಗಳಲ್ಲಿ ವಿದ್ಯುದೀಪಾಲಂಕಾರ ಮಾಡಲಾಗಿತ್ತು. ರಾಜ್ಯೋತ್ಸವದವರೆಗೂ ಅದನ್ನು ಮುಂದುವರಿಸಿದ್ದರಿಂದ ‘ಕನ್ನಡ ಹಬ್ಬ’ದ ಕಳೆ ಹೆಚ್ಚಿದೆ. ಜಿಲ್ಲಾಧಿಕಾರಿ ಕಚೇರಿ, ಪ್ರಾದೇಶಿಕ ಆಯುಕ್ತರ ಕಚೇರಿಗಳಿಗೆ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ಗಡಿನಾಡಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ADVERTISEMENT

ಮೆರವಣಿಗೆ ವೀಕ್ಷಣೆಗೆ ಬರುವವರಿ
ಗಾಗಿ ಇಲ್ಲಿನ ಸರ್ಕಾರಿ ಸರ್ದಾರ್ಸ್‌ ಪ್ರೌಢ
ಶಾಲೆ ಮೈದಾನದಲ್ಲಿ ಬೆಳಗಾವಿಯ ಹುಕ್ಕೇರಿ ಹಿರೇಮಠದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆಯಿಂದಲೇ ಮಹಿಳೆಯರು ಹೋಳಿಗೆ ತಯಾರಿಸುವ ಕಾಯಕದಲ್ಲಿ ನಿರತವಾಗಿದ್ದಾರೆ. ಚಂದ್ರಶೇಖರ ಶಿವಾ
ಚಾರ್ಯ ಸ್ವಾಮೀಜಿ ಮೈದಾನಕ್ಕೆ ಭೇಟಿ ನೀಡಿ, ಹೋಳಿಗೆ ಸಿದ್ಧಪಡಿಸುತ್ತಿ
ರುವುದನ್ನು ವೀಕ್ಷಿಸಿದರು.

ಸಚಿವರಿಂದ ಧ್ವಜಾರೋಹಣ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನ.1ರಂದು ಬೆಳಿಗ್ಗೆ 10.30ಕ್ಕೆ 67ನೇ
ಕರ್ನಾಟಕ ರಾಜ್ಯೋತ್ಸವ ಕಾರ್ಯ
ಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ
ಸಚಿವ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ನೆರವೇರಿಸು
ವರು. ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಮತ್ತು ಅಧಿಕಾರಿಗಳು ಭಾಗವಹಿಸುವರು. ಇದೇವೇಳೆ, ಗಡಿಯಲ್ಲಿ ಕನ್ನಡದ ಉಳಿವಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರು, ಪತ್ರಕರ್ತರು ಹಾಗೂ ಸಾಹಿತಿಗಳನ್ನು ಸನ್ಮಾನಿಸಲಾಗುವುದು. ಬಳಿಕ, ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಪ್ರತಿಬಿಂಬಿಸುವ ರೂಪಕಗಳ ಮೆರವಣಿಗೆ ಆರಂಭವಾಗಲಿದೆ.

ನ.2ರಂದು ಸಂಜೆ 5.30ಕ್ಕೆ ಇಲ್ಲಿನ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಚಿವ ಗೋವಿಂದ ಕಾರಜೋಳ ಉದ್ಘಾಟಿಸುವರು. ಅತಿಥಿಯಾಗಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುವರು. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್‌ ಉಪಸ್ಥಿತರಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.