ಚಿಕ್ಕೋಡಿ: ‘ಮಾಲೀಕರ ವಿರುದ್ಧ ಕಾರ್ಮಿಕರು ಹೋರಾಟ ನಡೆಸಿದ ಪ್ರತೀಕವಾಗಿ ಮೇ 1ರಂದು ಕಾರ್ಮಿಕ ದಿನಾಚರಣೆ ಮಾಡಲಾಗುತ್ತದೆ’ ಎಂದು ಚಿಕ್ಕೋಡಿ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್. ವಣ್ಣೂರ ಹೇಳಿದರು.
ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಕಾರ್ಮಿಕ ದಿನಾಚರಣೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರಿಂದ ಅವರಿಗೆ ಕುಟುಂಬ ನಿರ್ವಹಣೆಗೆ ಆರ್ಥಿಕ ಬಲ ಬಂದಂತಾಗಿದೆ. ಮಕ್ಕಳ ಶಿಕ್ಷಣ, ಮನೆ ನಿರ್ವಹಣೆ ಮುಂತಾದ ಕಾರ್ಯನಿರ್ವಹಣೆಗೆ ಅನುಕೂಲವಾಗುತ್ತದೆ’ ಎಂದರು.
ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಮನ ಶೆಳಕೆ, ಉಪಾಧ್ಯಕ್ಷೆ ವಂದನಾ ಕಾಂಬಳೆ, ಪಿಡಿಒ ಸಿದ್ದಪ್ಪ ಹಿರೇಕುರುಬರ, ಕಾರ್ಯದರ್ಶಿ ಶಿವಾಜಿ ಕುಲಕರ್ಣಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.