ಬೆಳಗಾವಿ: ಇಲ್ಲಿನ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ವ್ಯವಸ್ಥಾಪಕನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೋವಿಡ್–19ದೃಢಪಟ್ಟಿದೆ.
ಶುಕ್ರವಾರ ಬೆಳಿಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.
ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.