
ಬೆಳಗಾವಿ: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಫೆ.14ರಂದು ಮಧ್ಯಾಹ್ನ 2ಕ್ಕೆ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಎದುರಿನ ಮೈದಾನದಲ್ಲಿ 14,500 ಹಿರಿಯ ನಾಗರಿಕರೊಂದಿಗೆ ವಿಶಿಷ್ಟವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೇದಿಕೆ ಸಿದ್ಧಪಡಿಸಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರಿಯ ನಾಗರಿಕರನ್ನು ಆಹ್ವಾನಿಸಿದ್ದೇವೆ. ಅವರಿಗಾಗಿ ಮೋಜಿನ ಆಟ, ಸಂವಾದ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದರು.
‘ಲಕ್ಷ್ಮಿ ಹೆಬ್ಬಾಳಕರ ಕಳೆದ ಎರಡೂವರೆ ವರ್ಷಗಳಿಂದ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನ, 150 ದೇವಸ್ಥಾನಗಳ ಜೀರ್ಣೋದ್ಧಾರ, ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತು ಧಾರ್ಮಿಕ ರಂಗಕ್ಕೆ ಹೆಚ್ಚಿನ ಅನುದಾನ ತಂದಿದ್ದಾರೆ’ ಎಂದರು.
‘ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ. ಜಿಲ್ಲೆಯ ವಿವಿಧ ಮಠಾಧೀಶರು, ಕಾಂಗ್ರೆಸ್‌ನ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. 20 ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.