
ಪ್ರಜಾವಾಣಿ ವಾರ್ತೆಮಗುವಿಗೆ ಪಲ್ಸ್ ಪೊಲಿಯೊ ಹಾಕಿದ ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಪಾಲಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು. ಪೋಲಿಯೊ ಮುಕ್ತ ಸಮಾಜ
ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಇಲ್ಲಿನ ಗೃಹ ಕಚೇರಿಯಲ್ಲಿ ಭಾನುವಾರ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ ದಂಡಗಿ, ಅಭಿಯಾನದ ನೋಡಲ್ ಅಧಿಕಾರಿ ಡಾ.ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.