ADVERTISEMENT

‘ಪಕ್ಷ ಸಂಘಟನೆ ಇನ್ನಷ್ಟು ಚುರುಕಾಗಲಿ’: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 25 ಮೇ 2025, 13:05 IST
Last Updated 25 ಮೇ 2025, 13:05 IST
ಗೋಕಾಕದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಆಂಧ್ರ ಪ್ರದೇಶದ ಸಹ ಉಸ್ತುವಾರಿಯಾಗಿ ನೇಮಕಗೊಂಡ ಜಾವೀದ ಮುಲ್ಲಾ ಅವರನ್ನು ಅಭಿನಂದಿಸಿದರು
ಗೋಕಾಕದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಆಂಧ್ರ ಪ್ರದೇಶದ ಸಹ ಉಸ್ತುವಾರಿಯಾಗಿ ನೇಮಕಗೊಂಡ ಜಾವೀದ ಮುಲ್ಲಾ ಅವರನ್ನು ಅಭಿನಂದಿಸಿದರು   

ಗೋಕಾಕ: ಪಕ್ಷ ಸಂಘಟನೆ ಹಾಗೂ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ, ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಸಚಿವ ಸತೀಶ ಜಾರಕಿಹೊಳಿ ಸಲಹೆ ನೀಡಿದರು.

ಅಖಿಲ ಭಾರತೀಯ ಕಾಂಗ್ರೆಸ್‌ ಸಮಿತಿಯ ಆಂಧ್ರ ಪ್ರದೇಶದ ಸಹ ಉಸ್ತುವಾರಿಯಾಗಿ ನೇಮಕಗೊಂಡಿರುವ ಯುವ ಧುರೀಣ ಜಾವೀದ ಮುಲ್ಲಾ ಅವರಿಗೆ ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ ಭಾನುವಾರ ಅಭಿನಂದಿಸಿ ಅವರು ಮಾತನಾಡಿದರು.

‘ಬೂತ್‌ ಹಾಗೂ ವಾರ್ಡ್‌ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಆದ್ಯತೆ ನೀಡುವ ಮೂಲಕ ಕಾರ್ಯಕರ್ತರಲ್ಲಿ ಒಗ್ಗಟ್ಟಿನ ಸಂಚಲನ ಮೂಡಿಸಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಕಾರ್ಯ ಆಗಬೇಕು’ ಎಂದರು.

ADVERTISEMENT

ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಲಾಗುವುದು ಎಂದು ಜಾವೀದ ಮುಲ್ಲಾ ಹೇಳಿದರು.

ಸತೀಶ ಜಾರಕಿಹೊಳಿ ಅವರನ್ನೂ ಜಾವೀದ ಮುಲ್ಲಾ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.