ADVERTISEMENT

ಗಡಿ ಸಮಸ್ಯೆ ಇತ್ಯರ್ಥಕ್ಕೆ ಎಂಇಎಸ್ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 14:21 IST
Last Updated 9 ಆಗಸ್ಟ್ 2021, 14:21 IST

ಬೆಳಗಾವಿ:ಗಡಿ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಚಳವಳಿ ಆರಂಭಿಸುವ ಮೂಲಕ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯು ವಿವಾದವನ್ನು ಕೆಣಕಲು ಮುಂದಾಗಿದೆ.

ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ವಿವಿಧ ಗ್ರಾಮಗಳ ಗ್ರಾಮಸ್ಥರಿಂದ ಸಂಗ್ರಹಿಸಿದ 11ಸಾವಿರ ಪತ್ರಗಳನ್ನು ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ‘ಕ್ರಾಂತಿ ದಿನ’ದ ಅಂಗವಾಗಿ ಅಂಚೆ ಮೂಲಕ ಸೋಮವಾರ ರವಾನಿಸಿದರು.

‘ಪ್ರಧಾನಿ ಗಮನಸೆಳೆಯಲು ಈ ಚಳವಳಿ ಹಮ್ಮಿಕೊಂಡಿದ್ದೇವೆ. ವಿವಾದವನ್ನು ಕೂಡಲೇ ಬಗೆಹರಿಸಿ ನ್ಯಾಯ ದೊರಕಿಸಿಕೊಡಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ’ ಎಂದು ಅವರು ತಿಳಿಸಿದರು. ಸ್ಥಳೀಯ ಕಾರ್ಯಕರ್ತರು ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.