ADVERTISEMENT

ನೀರು: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 22 ಮೇ 2019, 12:26 IST
Last Updated 22 ಮೇ 2019, 12:26 IST

ಬೆಳಗಾವಿ: ‘2016ರಿಂದ ಕರ್ನಾಟಕಕ್ಕೆ ಬಿಡುಗಡೆ ಮಾಡಿದ 6.5 ಟಿಎಂಸಿ ನೀರನ್ನು ಮರಳಿಸುವವರೆಗೆ ಕರ್ನಾಟಕದೊಂದಿಗೆ ನೀರು ವಿನಿಮಯ ಒಪ್ಪಂದಕ್ಕೆ ಸಹಿ ಹಾಕುವುದಿಲ್ಲವೆಂದು ಮಹಾರಾಷ್ಟ್ರ ಸರ್ಕಾರ ಪಟ್ಟು ಹಿಡಿದಿದೆ ಎಂಬ ಆತಂಕಕಾರಿ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.

‘ವಿಜಯಪುರ ಜಿಲ್ಲೆಯ ತುಬಚಿ ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರದ ಜತ್ತ ಪ್ರದೇಶಕ್ಕೆ ನೀರು ಪೂರೈಸಲು ಇರುವ ತಾಂತ್ರಿಕ ತೊಂದರೆಯನ್ನು ಖುದ್ದಾಗಿ ತಿಳಿದುಕೊಳ್ಳಲು ಯೋಜನಾ ಪ್ರದೇಶಕ್ಕೆ ಭೇಟಿ ನೀಡಬೇಕು’ ಎಂದು ಅಲ್ಲಿನ ಮುಖ್ಯಮಂತ್ರಿಯನ್ನು ಆಹ್ವಾನಿಸಲಾಗಿದೆ. ಅಥವಾ ಅಲ್ಲಿಯ ನೀರಾವರಿ ಸಚಿವ ಗಿರೀಶ ಮಹಾಜನ ಅವರನ್ನೊಳಗೊಂಡ ನೀರಾವರಿ ಪರಿಣತರ ತಂಡವೊಂದನ್ನು ಯೋಜನಾ ಪ್ರದೇಶಕ್ಕೆ ಕಳುಹಿಸುವಂತೆ ಕೋರಲಾಗಿದೆ’ ಎಂದಿದ್ದಾರೆ.

‘ಒಪ್ಪಂದ ಮೊದಲು, ನೀರು ಬಿಡುಗಡೆ ನಂತರ’ ಎಂಬ ನೀತಿಯನ್ನು ಹಿರಿಯ ಅಧಿಕಾರಿಗಳು ಅನುಸರಿಸುತ್ತಿದ್ದು, ಒಪ್ಪಂದಕ್ಕೆ ಕಾಯದೇ ತಕ್ಷಣ ಕೊಯ್ನಾ ಅಥವಾ ವರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲು ಆದೇಶಿಸಬೇಕು’ ಎಂದು ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.