ADVERTISEMENT

‘ಗ್ರಂಥಾಲಯಗಳಲ್ಲೇ ವ್ಯಕ್ತಿತ್ವ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 2:28 IST
Last Updated 13 ಆಗಸ್ಟ್ 2022, 2:28 IST
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಎಸ್. ತೇರದಾಳ ಅವರು ರಾಮಯ್ಯ ಅವರಿಗೆ ಸಸಿ ನೀಡಿದರು
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಎಸ್. ತೇರದಾಳ ಅವರು ರಾಮಯ್ಯ ಅವರಿಗೆ ಸಸಿ ನೀಡಿದರು   

ಬೆಳಗಾವಿ: ‘ವಿದ್ಯಾರ್ಥಿ ದೆಸೆಯಲ್ಲಿ ಗ್ರಂಥಾಲಯದಲ್ಲಿ ಸಮಯ ಕಳೆದು, ಶಿಸ್ತಿನಿಂದ ಅಧ್ಯಯನ ಮಾಡಿ ವಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿಯ ಉಪನಿರ್ದಶಕ ರಾಮಯ್ಯ ಹೇಳಿದರು.

ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾ ವಿದ್ಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಪ್ರಾಚಾರ್ಯ ಎಸ್.ಎಸ್. ತೇರದಾಳ, ಗ್ರಂಥಾಲಯಗಳಲ್ಲಿ ನಿಯಮಿತವಾಗಿ ಸಮಯ ಕಳೆದವರು ಸುಲಭವಾಗಿ ಯಶಸ್ಸು ಗಳಿಸುತ್ತಾರೆ ಎಂದರು.

ADVERTISEMENT

ಗ್ರಂಥಪಾಲಕರಾದ ಸುಮನ್ ಮುದ್ದಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ರಾಜು ಗಡಾದ ಅವರು ‘ಜೋಟರೋ’ ಸಾಫ್ಟವೇರ್‌ ಬಗ್ಗೆ, ಪ್ರಕಾಶ ಇಚಲಕರಂಜಿ ಅವರು ‘ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ‘ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ರಾಕೇಶ್ ಕರೆಗಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.