ADVERTISEMENT

ಹಿರೇಬಾಗೇವಾಡಿ: ಶಿವಾನಂದ ಶಿವಾಚಾರ್ಯರು ಲಿಂಗೈಕ್ಯ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 2:03 IST
Last Updated 1 ಡಿಸೆಂಬರ್ 2025, 2:03 IST
ಶಿವಾನಂದ ಶಿವಾಚಾರ್ಯರು
ಶಿವಾನಂದ ಶಿವಾಚಾರ್ಯರು   

ಹಿರೇಬಾಗೇವಾಡಿ: ಸಮೀಪದ ಮುತ್ನಾಳ ಗ್ರಾಮದ ಕೇದಾರ ಶಾಖಾಪೀಠ ಹಿರೇಮಠದ ಶಿವಾನಂದ ಶಿವಾಚಾರ್ಯರು (65) ಭಾನುವಾರ ಬೆಳಗಿನ ಜಾವ ನಿಧನರಾದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮುತ್ನಾಳದ ಹಿರೇಮಠ ಹಾಗೂ ಸವದತ್ತಿ ತಾಲ್ಲೂಕಿನ ಬೆಟಸೂರ ಮಠಕ್ಕೂ ಅವರು ಉತ್ತರಾಧಿಕಾರಿಯಾಗಿದ್ದರು. ನಿಧನರಾದ ನಂತರ ಬೆಟಸೂರಿನ ಮಠಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿ, ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ನಂತರ ಮುತ್ನಾಳದಲ್ಲಿ ಮೆರವಣಿಗೆ ನಡೆಸಿದ ನಂತರ, ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.

ADVERTISEMENT

ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನ ಕೈಗೊಂಡು, ಮಠದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮುತ್ನಾಳ ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯರ ಅಂತಿಮ ದರ್ಶನದಲ್ಲಿ ವಿವಿಧ ಮಠಾಧೀಶರು ಗಣ್ಯರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.