ADVERTISEMENT

ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ: ವಿದೇಶಗಳಲ್ಲಿ ವಚನ ಸಂಸ್ಕೃತಿ ಯಾತ್ರೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2024, 15:52 IST
Last Updated 17 ನವೆಂಬರ್ 2024, 15:52 IST
‘ಭಾರತ ವಚನ ಸಂಸ್ಕೃತಿ ಯಾತ್ರೆ’ಯಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಜಾಗತಿಕ ಲಿಂಗಾಯತ ಮಹಾಸಭಾದ ತಂಡ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಭಾನುವಾರ ತೆರಳಿತು
‘ಭಾರತ ವಚನ ಸಂಸ್ಕೃತಿ ಯಾತ್ರೆ’ಯಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಜಾಗತಿಕ ಲಿಂಗಾಯತ ಮಹಾಸಭಾದ ತಂಡ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಭಾನುವಾರ ತೆರಳಿತು   

ಬೆಳಗಾವಿ: ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ಬಾಲಿ, ಮಲೇಷಿಯಾ ಹಾಗೂ ಥಾಯ್ಲೆಂಡ್‌ ದೇಶಗಳಲ್ಲಿ 11 ದಿನಗಳವರೆಗೆ ನಡೆಯಲಿರುವ ‘ಭಾರತ ವಚನ ಸಂಸ್ಕೃತಿ ಯಾತ್ರೆ’ಯಲ್ಲಿ ಪಾಲ್ಗೊಳ್ಳಲು ಬೆಳಗಾವಿಯಿಂದಲೂ ಒಂದು ತಂಡ ವಿದೇಶಕ್ಕೆ ತೆರಳಿದೆ.

ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಈ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಲಿದ್ದಾರೆ. ಸಾಣೇಹಳ್ಳಿ ಶ್ರೀಗಳ ನೇತೃತ್ವದಲ್ಲಿ ಹಿರಿಯರ ತಂಡವು ಬೆಂಗಳೂರು ವಿಮಾನ ನಿಲ್ದಾಣದಿಂದ ಭಾನುವಾರ ಸಂಜೆ ಪ್ರಯಾಣ ಬೆಳೆಸಿತು.

ಮಾಜಿ ಮುಖ್ಯಮಂತ್ರಿ ಡಿ.ಬಿ.ಸದಾನಂದ ಗೌಡ, ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್‌.ಕಿರಣಕುಮಾರ್‌, ಹಿರಿಯ ಪತ್ರಕರ್ತ ರಂಜಾನ್‌ ದರ್ಗಾ, ಸಾಹಿತಿ ಪ್ರೊ.ಸಿದ್ದು ಯಾಪಲಪರವಿ ಹಾಗೂ ಬೆಳಗಾವಿ ಜಿಲ್ಲೆಯಿಂದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಪ್ರಧಾನ ಕಾರ್ಯದರ್ಶಿ ಅಶೋಕ ಮಳಗಲಿ, ಅನ್ನಪೂರ್ಣ ಮಳಗಲಿ, ಮಹಾನಗರ ಘಟಕದ ಉಪಾಧ್ಯಕ್ಷ ಈರಣ್ಣ ಚಿನಗುಡಿ ಕೂಡ ಪಾಲ್ಗೊಂಡಿದ್ದಾರೆ.

ADVERTISEMENT

ಈ ವಿದೇಶ ಪ್ರವಾಸದಲ್ಲಿ ವಚನ ಸಾಹಿತ್ಯದಲ್ಲಿ ಇರುವ ಜಾಗತಿಕ ಮೌಲ್ಯಗಳನ್ನು ಬಿಂಬಿಸಲಾಗುವುದು. ಸಾಣೇಹಳ್ಳಿ ಕಲಾಸಂಘದಿಂದ ‘ಉರಿಲಿಂಗಪೆದ್ದಿ’ ನಾಟಕ ಪ್ರದರ್ಶನ ಕೂಡ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್‌.ಎಂ.ಸುರೇಶ್‌ ಎಲ್ಲ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯಾಧ್ಯಕ್ಷ ಸಿ.ಎಸ್‌. ಬೋಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.