ADVERTISEMENT

ಬೆಳಗಾವಿ | ಅಕ್ರಮವಾಗಿ ಸಾಗಿಸುತ್ತಿದ್ದ ₹49 ಲಕ್ಷ ಮೌಲ್ಯದ ಮದ್ಯ ವಶ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 14:25 IST
Last Updated 1 ಅಕ್ಟೋಬರ್ 2024, 14:25 IST
<div class="paragraphs"><p>ಮದ್ಯ (ಪ್ರಾತಿನಿಧಿಕ ಚಿತ್ರ)</p></div>

ಮದ್ಯ (ಪ್ರಾತಿನಿಧಿಕ ಚಿತ್ರ)

   

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ₹49 ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಮಂಗಳವಾರ ನಸುಕಿನಲ್ಲಿ ವಶಕ್ಕೆ ಪಡೆದಿದ್ದಾರೆ.

‘ಬೆಳಗಾವಿ– ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್ ವಾಹನ ತಪಾಸಣೆ ಮಾಡಲಾಯಿತು. ಕಸದ ತೊಟ್ಟಿಗಳ ರೀತಿ ಸಾಗಿಸುತ್ತಿರುವುದನ್ನು ಪರಿಶೀಲಿಸಿದಾಗ, 255 ಮದ್ಯದ ಬಾಟಲಿಗಳ ಬಾಕ್ಸ್ ಪತ್ತೆಯಾದವು. ಚಾಲಕ ಪರಾರಿಯಾದ’ ಎಂದು ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.