ADVERTISEMENT

ಬೆಳಗಾವಿಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಅಗತ್ಯ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 14:21 IST
Last Updated 9 ಜೂನ್ 2021, 14:21 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಳಗಾವಿ: ‘ಬೆಳಗಾವಿಯು ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್ ವಿಸ್ತರಿಸುವ ಅಗತ್ಯವಿದೆ. ಜೂನ್ 10ರಂದು ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಇಲ್ಲಿ ಬುಧವಾರ ಮಾಧ್ಯಮ ‍ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎಷ್ಟು ದಿನ ವಿಸ್ತರಿಸಬೇಕು ಎನ್ನುವುದನ್ನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧರಿಸಲಾಗುವುದು’ ಎಂದರು.

‘ಇತರ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ವಿಭಿನ್ನ ಪರಿಸ್ಥಿತಿ ಇದೆ. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವುದರಿಂದಾಗಿ ಜನ ಸಂಪರ್ಕ ಇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಈ ವಿಷಯ ಸೂಕ್ಷ್ಮವಾಗಿ ಪರಿಗಣಿಸಿ ತೀರ್ಮಾನಿಸಬೇಕಾಗುತ್ತದೆ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ 204 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. 61 ಪ್ರಕರಣಗಳಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 151 ಮಂದಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 15 ಮಂದಿ ಸಾವಿಗೀಡಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.