ADVERTISEMENT

ಮಹಾರಾಷ್ಟ್ರ ಗಡಿಯ ಕೆಲ ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್‌ಡೌನ್‌ಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 12:58 IST
Last Updated 5 ಜುಲೈ 2020, 12:58 IST
ತೆಲಸಂಗ ಗ್ರಾಮದಲ್ಲಿ ಭಾನುವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ರಸ್ತೆ ಬಿಕೋ ಎನ್ನುತ್ತಿತ್ತು
ತೆಲಸಂಗ ಗ್ರಾಮದಲ್ಲಿ ಭಾನುವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ರಸ್ತೆ ಬಿಕೋ ಎನ್ನುತ್ತಿತ್ತು   

ತೆಲಸಂಗ(ಬೆಳಗಾವಿ): ನೆರೆಯ ಮಹಾರಾಷ್ಟ್ರದ ಗಡಿ ಗ್ರಾಮ ಮತ್ತು ಅಥಣಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೆಲಸಂಗ ಕೊಟ್ಟಲಗಿ, ಕಕಮರಿ ಮೊದಲಾದ ಗ್ರಾಮಗಳಲ್ಲಿ ಜನರು ಸ್ವಯಂಪ್ರೇರಿತ ಲಾಕ್‍ಡೌನ್‍ಗೆ ಮುಂದಾಗಿದ್ದಾರೆ.

ಗ್ರಾಮದಲ್ಲಿ ಭಾನುವಾರ ಲಾಕ್‍ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಸೋಮವಾರದಿಂದ ಬೆಳಿಗ್ಗೆ 7ರಿಂದ 10ರವರೆಗೆ ವ್ಯಾಪಾರ ವಹಿವಾಟು ನಡೆಸಿ, ನಂತರ ಲಾಕ್‌ಡೌನ್‌ ಮಾಡಲು ಜನರು ನಿರ್ಧರಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ಈ ಸೂಚನೆ ನೀಡಲಾಗಿದೆ.

ಇಲ್ಲಿನ ‘ಮಂಗಳವಾರದ ಸಂತೆ’ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಒಬ್ಬೊಬ್ಬರೆ ಬರಬೇಕು. ಮಾಸ್ಕ್‌ ಧರಿಸಿರಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.