ಸವದತ್ತಿ: ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.
ಅದಾಲತ್‌ನಲ್ಲಿ ಬಾಕಿ ಇರುವ 1388 ಪ್ರಕರಣಗಳನ್ನು ಕೈಗೆತ್ತಿಕೊಂಡು 400 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿ ಸುಮಾರು ₹ 94 ಲಕ್ಷದಷ್ಟು ವಸೂಲಾತಿ ಮಾಡಲಾಯಿತು. 3440 ವ್ಯಾಜ್ಯಪೂರ್ವ ಪ್ರಕರಣಗಳ ಪೈಕಿ 702ನ್ನು ಇತ್ಯರ್ಥಪಡಿಸಿ ಸುಮಾರು ₹ 1.15 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ನ್ಯಾಯಾಧೀಶ ಶಶಿಧರ ಎಂ. ಗೌಡ ತಿಳಿಸಿದರು.
ಈ ವೇಳೆ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಸಿದ್ರಾಮ ರೆಡ್ಡಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎನ್. ಮುತ್ತಿನ, ಎ.ಎ.ನೇಸರಿಕರ, ಎಂ.ಕೆ.ನಂದೆನ್ನವರ, .ಪಿ.ಎಂ. ಉಪ್ಪಾರ, ಆರ್.ಎಚ್. ಭಾವಾಖಾನ, ಯು.ಎಂ. ನಾಗನೂರು, ವಿ.ವಿ.ಅಂಗಡಿ, ಎಸ್.ಎಸ್. ಹಿರೇಮಠ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.