ADVERTISEMENT

ಬೆಳಗಾವಿ ಲೋಕಸಭಾ |19 ಕ್ಷೇತ್ರಗಳಲ್ಲಿ ಕಣಕ್ಕೆ: ರಾಮಾಂಜನಪ್ಪ ಆಲ್ದಳ್ಳಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 13:25 IST
Last Updated 7 ಏಪ್ರಿಲ್ 2024, 13:25 IST

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 19 ಕ್ಷೇತ್ರಗಳಲ್ಲಿ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಷ್ಟ್‌)ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದೇವೆ’ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. ಭ್ರಷ್ಟಾಚಾರ ಮಿತಿಮೀರಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಹೀಗಿರುವಾಗ, ಬಿಜೆಪಿಯವರು ಕೋಮುವಾದದ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ನೇತೃತ್ವದ ಸರ್ಕಾರವೂ ದೇಶದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿಲ್ಲ. ಹಾಗಾಗಿ ಜನರ ಸಮಸ್ಯೆಗೆ ಧ್ವನಿಯಾಗುವ ದೃಷ್ಟಿಯಿಂದ 19 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ’ ಎಂದರು.

‘ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧಿಸಲಿದ್ದಾರೆ. ಜನರು ಹೆಚ್ಚಿನ ಮತಗಳನ್ನು ನೀಡಿ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಲಕ್ಷ್ಮಣ ಜಿಡಗನ್ನವರ, ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.