ADVERTISEMENT

ಲಂಬಾಣಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ : ಸಚಿವ ಜೋಶಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 15:39 IST
Last Updated 3 ಏಪ್ರಿಲ್ 2024, 15:39 IST
ಹುಬ್ಬಳ್ಳಿಯ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಲಂಬಾಣಿ ಸಮುದಾಯದ ಪ್ರಮುಖರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿದರು.
ಹುಬ್ಬಳ್ಳಿಯ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಲಂಬಾಣಿ ಸಮುದಾಯದ ಪ್ರಮುಖರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿದರು.   

ಹುಬ್ಬಳ್ಳಿ: ಲಂಬಾಣಿ ಸಮುದಾಯದವರ ಏಳಿಗೆಗೆ ಪೂರಕವಾಗುವಂತಹ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದು, ಅವರ ಪ್ರಗತಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಲಂಬಾಣಿ ಸಮುದಾಯದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಲಂಬಾಣಿ ಸಮುದಾಯ ವಿಶಿಷ್ಟ ಸಂಸ್ಕೃತಿ ಹೊಂದಿದೆ. ತಮ್ಮ ಶ್ರಮದ ಮೂಲಕ ದೇಶದ ಏಳಿಗೆಯಲ್ಲಿ ತೊಡಗಿಸಿಕೊಂಡಿದೆ. ಲಂಬಾಣಿಗಳ ತಾಂಡಾ ಅಭಿವೃದ್ಧಿ ಪಡಿಸಬೇಕು, ಅವರ ಮಕ್ಕಳಿಗೆ ಶಿಕ್ಷಣ ನೀಡಬೇಕು. ಈ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ADVERTISEMENT

ಪಕ್ಷದ ಸಿದ್ಧಾಂತ ಮತ್ತು ಮೋದಿಯವರ ಅಭಿವೃದ್ಧಿ ಪರ ಕೆಲಸವನ್ನು ಮೆಚ್ಚಿ ಇದೇ ಸಂದರ್ಭದಲ್ಲಿ ಬೇರೆ ಪಕ್ಷದ
ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು.

ಸಭೆಯಲ್ಲಿ ಸಮುದಾಯದ ಪ್ರಮುಖರಾದ ಕೃಷ್ಣಾಜಿ ಚೌಹಣ, ಹರಿಲಾಲ ಪವಾರ, ಮಂಗ್ಲಪ್ಪ ಲಮಾಣಿ, ಅರ್ಜುನ ಲಮಾಣಿ, ಚಂದ್ರಶೇಖರ ಗೋಕಾಕ ಹಾಗೂ ತಾಂಡಾದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.