ADVERTISEMENT

ಬೆಳಗಾವಿ: ಮೂವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 31 ಮೇ 2025, 8:12 IST
Last Updated 31 ಮೇ 2025, 8:12 IST
   

ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಶನಿವಾರ, ಮೂವರು ಅಧಿಕಾರಿಗಳಿಗೆ ಸೇರಿದ ಐದು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದರು.

ಲೋಕಾಯುಕ್ತ ಎಸ್ಪಿ ಹನಮಂತರಾಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ದೇವರಾಜ್ ಅರಸು ಅಭಿವೃದ್ಧಿ ‌ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಅವರ ಬೆಳಗಾವಿಯ ವಿದ್ಯಾ ನಗರದಲ್ಲಿರುವ ಮನೆ, ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ADVERTISEMENT

ಇನ್ನೊಂದೆಡೆ, ಧಾರವಾಡದ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಎಚ್‌.ಸಿ. ಸುರೇಶ ಅವರ ಬೆಳಗಾವಿಯ ಹನುಮಾನ್ ನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರಿಗೆ ಸೇರಿದ, ಇಲ್ಲಿನ ಹನುಮಾನ ‌ನಗರದ ಮನೆ ಮೇಲೂ ದಾಳಿ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.