ಸಾಂದರ್ಭಿಕ ಚಿತ್ರ
ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗಾಗಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ರಾತ್ರಿ ಸಚಿವರು ಹಾಗೂ ಮುಖಂಡರ ಸಭೆ ನಡೆಯಿತು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲೆಯ ಕಾಂಗ್ರೆಸ್‌ನ ಎಲ್ಲ ಶಾಸಕರೂ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ ಸವದಿ, ಆಸೀಫ್ ರಾಜು ಸೇಠ್, ಅಶೋಕ ಪಟ್ಟಣ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಭೆಯ ನೇತೃತ್ವ ವಹಸಿದ್ದರು.
ಮುಂದಿಬ ಬಾರಿ ಲೋಕಸಭೆಗೆ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಆಯ್ಕೆಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಆಕಾಂಕ್ಷಿಗಳನ್ನು ಕೂಡ ಕರೆಸಿ, ಅವರ ಅರ್ಹತೆ ಪರಿಶೀಲಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.