ADVERTISEMENT

ಚಂದ್ರಗ್ರಹಣ: ಯಲ್ಲಮ್ಮನಗುಡ್ಡದಲ್ಲಿ ಕೆಲಕಾಲ ದರ್ಶನ ಬಂದ್‌

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 14:44 IST
Last Updated 3 ಮಾರ್ಚ್ 2026, 14:44 IST
   

ಉಗರಗೋಳ: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಸಮೀಪದ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ಮಧ್ಯಾಹ್ನ 12ರಿಂದ ಸಂಜೆ 6.30ರವರೆಗೆ ದೇವಿ ದರ್ಶನ ಮತ್ತು ತೀರ್ಥ ಪ್ರಸಾದ ವಿತರಣೆ ಬಂದ್ ಮಾಡಲಾಗಿತ್ತು.

ಹೋಳಿ ಹುಣ್ಣಿಮೆ ಪ್ರಯುಕ್ತ ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು, ಮುಂಜಾವಿನಿಂದಲೇ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ, ವಿವಿಧ ಕಾಣಿಕೆ ಅರ್ಪಿಸಿ ಭಕ್ತಿ ಮೆರೆದರು.

ಸಂಜೆ 6.40ಕ್ಕೆ ದೇವಸ್ಥಾನ ಶುದ್ಧೀಕರಣಗೊಳಿಸಿದ ನಂತರ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಮತ್ತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.