ಬೆಳಗಾವಿ: ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಇಲ್ಲಿನ ಜಿಲ್ಲಾಧಿಕಾರಿ ಹುದ್ದೆಗೆ ಮತ್ತೆ ವರ್ಗಾಯಿಸಲಾಗಿದೆ.
ಇದೇ ಜಿಲ್ಲೆಯವರಾಗಿದ್ದ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ವರ್ಗಾಯಿಸಲಾಗಿತ್ತು. ಆ ಸ್ಥಾನದಲ್ಲಿ ಡಾ.ಕೆ. ಹರೀಶ್‌ಕುಮಾರ್ ಅವರು ಈವರೆಗೆ ಕಾರ್ಯನಿರ್ವಹಿಸಿದ್ದರು. ಚುನಾವಣೆ ಮುಗಿದ ಕಾರಣ ಹಿರೇಮಠ ಅವರನ್ನು ಇಲ್ಲಿಗೆ ನಿಯುಕ್ತಿಗೊಳಿಸಲಾಗಿದೆ. ಹರೀಶ್‌ಕುಮಾರ್ ಅವರಿಗೆ ಉದ್ಯೋಗ ಮತ್ತು ತರಬೇತಿ ಆಯುಕ್ತರ ಹುದ್ದೆಗೆ (ಬೆಂಗಳೂರು) ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.