ADVERTISEMENT

ಮರಳು ಅಕ್ರಮ ಸಾಗಾಟ: ಮೂವರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 16:28 IST
Last Updated 23 ಜೂನ್ 2023, 16:28 IST
ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಹಾಗೂ ಟ್ರ್ಯಾಕ್ಟರ್ ಚಾಲಕರು.
ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಹಾಗೂ ಟ್ರ್ಯಾಕ್ಟರ್ ಚಾಲಕರು.   

ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಬೆಳಗಾವಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಮೂವರನ್ನು ವಶಕ್ಕೆ ಪಡೆದು, ಎರಡು ಟ್ರ್ಯಾಕ್ಟರ್ ಹಾಗೂ ದಾಸ್ತಾನು ಮಾಡಿದ್ದ ಮರಳು ವಶಪಡಿಸಿಕೊಂಡಿದ್ದಾರೆ.

ದಾಸ್ತಿಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಸಿದ್ರಾಮನಿ ಹಾಗೂ ಟ್ರ್ಯಾಕ್ಟರ್ ಚಾಲಕರಾದ ಬಸೀರ್‌ ಅಹಮ್ಮದ ಖಾಜಿ, ರಮೇಶ ಮಡಿವಾಳರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT