ADVERTISEMENT

ಬೆಳಗಾವಿ | ತಡೆಗೋಡೆಗೆ ಬೈಕ್ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 15:43 IST
Last Updated 1 ಜುಲೈ 2025, 15:43 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಎಂಕೆ. ಹುಬ್ಬಳ್ಳಿ: ಇಲ್ಲಿನ ಉಪ ಪೊಲೀಸ್ ಠಾಣೆ ಎದುರಿನ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಮಂಗಳವಾರ ತಡೆಗೋಡೆಗೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದ ಸಂಗಮೇಶ ಬಸಪ್ಪ ಚವಲಗಿ (32) ಮೃತರು. ಹಿಂಬದಿ ಸವಾರ ಶಂಕರಗೌಡ ರಾಮನಗೌಡ ಪಾಟೀಲ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಕಡೆಯಿಂದ ಚಿಕ್ಕನಂದಿಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಗುಡಗನಟ್ಟಿ, ಅಪರಾಧ ವಿಭಾಗದ ಪಿಎಸ್‌ಐ ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.