
ಪ್ರಜಾವಾಣಿ ವಾರ್ತೆಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 30 ಜನ ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ, ನಮ್ಮ ರಾಜ್ಯದ ಬೆಳಗಾವಿಯ ನಾಲ್ವರು ಸಾವಿಗೀಡಾಗಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಟ, ಇವರ ಪುತ್ರಿ ಮೇಘಾ ಹತ್ತರವಾಟ, ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಹಾಗೂ ಶಿವಾಜಿ ನಗರದ ನಿವಾಸಿ ಮಹಾದೇವಿ ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ. ವಿವಿಧ ಟ್ರಾವೆಲ್ ಏಜೆನ್ಸಿಗಳಿಂದ ಸುಮಾರು 500ಕ್ಕೂ ಹೆಚ್ಚು ಜನ ಪ್ರಯಾಗ್‌ರಾಜ್‌ಗೆ ತೆರಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಶವಗಳನ್ನು ಊರಿಗೆ ತರಲು ವಿಶೇಷ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.