ADVERTISEMENT

ಮಹದಾಯಿ: ಜಂಟಿ ಪರಿಶೀಲನಾ ಸಮಿತಿ ಭೇಟಿ ಇಂದು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 22:22 IST
Last Updated 18 ಮಾರ್ಚ್ 2021, 22:22 IST

ಬೆಳಗಾವಿ: ಕಳಸಾ ಬಂಡೂರಿ ಯೋಜನಾ ಪ್ರದೇಶವಾದ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿಗೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಮೂವರು ಅಧಿಕಾರಿಗಳನ್ನು ಒಳಗೊಂಡ ಜಂಟಿ ಪರಿಶೀಲನಾ ಸಮಿತಿಯು ಶುಕ್ರವಾರ (ಮಾರ್ಚ್‌ 19) ಮಧ್ಯಾಹ್ನ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕವು ಈಗಾಗಲೇ ಕಳಸಾ ನೀರನ್ನು ತಿರುಗಿಸಿಕೊಂಡಿದೆ ಎಂಬ ಗೋವಾದ ಆರೋಪದ ಹಿನ್ನೆಲೆಯಲ್ಲಿ ಜಂಟಿ ಸಮಿತಿಯ ಪರಿಶೀಲನೆಗೆ ಹಾಗೂ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ಆದೇಶ ನೀಡಿತ್ತು. ಕರ್ನಾಟಕದ ನವಿಲುತೀರ್ಥ ಅಣೆಕಟ್ಟಿನ ಸೂಪರಿಂಟೆಂಡಿಂಗ್ ಎಂಜಿನಿಯರ್‌ ಕೃಷ್ಣೋಜಿರಾವ್, ಗೋವಾದಿಂದ ಸೂಪರಿಂಟೆಂಡಿಂಗ್ ಎಂಜಿನಿಯರ್‌ ಎಂ.ಕೆ. ಪ್ರಸಾದ್ ಮತ್ತು ಮಹಾರಾಷ್ಟ್ರದಿಂದ ಶ್ರೀಥೋರಟ್ ಸಮಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT