ADVERTISEMENT

‘ಮಹದಾಯಿ ಅಧಿಸೂಚನೆ: ರೈತರ ಗೆಲುವು’: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 14:08 IST
Last Updated 28 ಫೆಬ್ರುವರಿ 2020, 14:08 IST
   

ಬೆಳಗಾವಿ: ‘ಇದು ರೈತರ ಗೆಲುವು. ಕೇವಲ ನಮ್ಮ ರೈತರಲ್ಲ, ಗೋವಾ, ಮಹಾರಾಷ್ಟ್ರ ಹಾಗೂ ದೇಶದ ಎಲ್ಲ ರೈತರ ಗೆಲುವು ಇದಾಗಿದೆ. ದೇಶದ ರೈತರೆಲ್ಲರೂ ಒಂದೇ’ ಎಂದು ಮಹದಾಯಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಇಲ್ಲಿಗೆ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹದಾಯಿ ಕುರಿತಂತೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇದೆ. ಅದಕ್ಕಾಗಿ ಹೆಚ್ಚೇನೂ ಮಾತನಾಡುವುದಿಲ್ಲ. ಮಹದಾಯಿ ಯೋಜನೆಯ ಸ್ಥಳವಾದ ಕಣಕುಂಬಿಗೆ ಶನಿವಾರ ಭೇಟಿ ನೀಡುತ್ತೇನೆ’ ಎಂದು ತಿಳಿಸಿದರು.

‘ನಾನು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೈವಿ ಭಕ್ತರಾಗಿದ್ದೇವೆ. ಅದಕ್ಕಾಗಿ ಯಶಸ್ಸು ಸಿಕ್ಕಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.