ಬೆಳಗಾವಿ: ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ವಿರೋಧಿಸಿ ಸೋಮವಾರ ಮಹಾಮೇಳಾವ್ ಗೆ ಮುಂದಾದ ಏಕೀಕರಣ ಸಮಿತಿ(ಎಂಇಎಸ್) ಪೊಲೀಸರು ವಶಕ್ಕೆ ಪಡೆದರು.
ಆರಂಭದಲ್ಲಿ ರಾಮಲಿಂಗಖಿಂಡ ಗಲ್ಲಿಯ ಎಂಇಎಸ್ ಕಚೇರಿಯಲ್ಲಿ ಕೆಲವು ಮುಖಂಡರನ್ನು ವಶಕ್ಕೆ ಪಡೆದರು. ನಂತರ ಸಂಭಾಜಿ ವೃತ್ತಕ್ಕೆ ಬಂದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
'ಬೀದರ್, ಭಾಲ್ಕಿ, ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಝಾಲಚ್ ಪಾಹಿಜೇ' ಎಂದು ಕಾರ್ಯಕರ್ತರು ನಾಡವಿರೋಧಿ ಘೋಷಣೆ ಕೂಗಿದರು. 'ನಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು' ಎಂದು ಒತ್ತಾಯಿಸಿದರು.
ಎಂಇಎಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಸುತ್ತಲಿನ ಆವರಣ, ಎಂಇಎಸ್ ಮುಖಂಡರ ಮನೆ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹಲವು ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ.
ಪ್ರತಿ 10 ನಿಮಿಷಕ್ಕೆ ವಿವಿಧ ದಿಕ್ಕುಗಳಿಂದ ಸಂಭಾಜಿ ವೃತ್ತಕ್ಕೆ ಗುಂಪು ಗುಂಪಾಗಿ ಕಾರ್ಯಕರ್ತರು ಬರುತ್ತಿದ್ದಾರೆ. ಅವರನ್ನು ವಶಕ್ಕೆ ಪಡೆದು, ಪರಿಸ್ಥಿತಿ ನಿಯಂತ್ರಣಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.