ADVERTISEMENT

ಮಹಾಮೇಳಾವ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮುಖಂಡರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2024, 6:08 IST
Last Updated 9 ಡಿಸೆಂಬರ್ 2024, 6:08 IST
   

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ನಡೆಸಲು ಮುಂದಾಗಿರುವ ಮಹಾಮೇಳಾವ್ ದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಕೊಲ್ಹಾಪುರದ ಶಿವಸೇನೆ ಮುಖಂಡರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ವಶಕ್ಕೆ ಪಡೆದರು.

ಶಿವಸೇನೆ ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ದೇವಣೆ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಬಿಗಿ ಭದ್ರತೆ ಚುರುಕುಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT