ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಜಯ ಸಿಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ತಿಳಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಸೇರಿ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜನರಪರವಾದ ಆಡಳಿತ ನೀಡುತ್ತಿವೆ. ಹಾಗಾಗಿ ಬಿಜೆಪಿ ಪರವಾಗಿ ಮತ ಚಲಾವಣೆಯಾಗುತ್ತವೆ ಎಂಬ ವಿಶ್ವಾಸವಿದೆ. ಕಳೆದ ಎರಡು ಅವಧಿಯಲ್ಲಿ ನಾನು ಕೈಗೊಂಡ ಸೇವೆ ಬಿಜೆಪಿಗೆ ಜಯ ತಂದುಕೊಡಲಿದೆ ಎಂದರು.
ಮತದಾರರು, ಶಾಸಕರು, ಸಚಿವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವೆ. ನಮ್ಮ ಸಚಿವರು, ಶಾಸಕರು, ಮುಖಂಡರು ಪಕ್ಷದೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರಿಂದ ಮೊದಲ ಪ್ರಾಶಸ್ತ್ಯದ ಮತ ನನಗೆ ಸಿಗಲಿದೆ. ಎರಡನೇ ಪ್ರಾಶಸ್ತ್ಯದ ಮತ ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.