ಬೆಳಗಾವಿ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ದಸರೆ ರಜೆಗೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಕಾಣೆಯಾಗಿದ್ದಾರೆ.
ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ನಿವಾಸಿಗಳಾದ ಇಸ್ರಾರ್ ಕಿತ್ತೂರ (17) ಇಬಾದ್ ಕಿತ್ತೂರ (13) ಅಳ್ನಾವರ ಮೂಲದ ನಮೀರಾ ಅಕ್ತರ್ (16) ಮೃತರಾದವರು.
ಪ್ರಹಾನಾ ಕಿತ್ತೂರ (34) ಎಂಬ ಮಹಿಳೆ ಎಂಬ ಮಹಿಳೆಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಸಮುದ್ರದಲ್ಲಿ ಕಣ್ಮರೆ ಆಗಿರುವ ಇರ್ಫಾನ್ ಕಿತ್ತೂರ (36) ಇಕ್ವಾನ್ ಕಿತ್ತೂರ (15), ಮಹಾರಾಷ್ಟ್ರ ಮೂಲದ ಪರಯಾನ್ ಮನಿಯರ್ (20) ಜಾಕಿರ್ ಮನಿಯರ್ (13) ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಮೂಲಗಳು ಖಚಿತಪಡಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.