ADVERTISEMENT

ಬೆಳಗಾವಿ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್‌ಗೆ ಎಂಇಎಸ್‌ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 15:36 IST
Last Updated 22 ನವೆಂಬರ್ 2023, 15:36 IST
ಬೆಳಗಾವಿಯ ಸುವರ್ಣ ವಿಧಾನಸೌಧ
ಬೆಳಗಾವಿಯ ಸುವರ್ಣ ವಿಧಾನಸೌಧ   

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಡಿ.4ರಂದು ‘ಮಹಾಮೇಳಾವ್‌’ ಆಯೋಜಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ತೀರ್ಮಾನಿಸಿದೆ.

ನಗರದಲ್ಲಿ ಬುಧವಾರ ನಡೆದ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಎಂಇಎಸ್‌ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್‌, ‘ಈ ಬಾರಿ ಮಹಾಮೇಳಾವ್‌ ಯಶಸ್ವಿಗೊಳಿಸಲು ಮತ್ತು ಇದಕ್ಕಿರುವ ತೊಡಕುಗಳನ್ನು ನಿವಾರಿಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿರುವ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದು ಹೇಳಿದರು.

‘ಮಹಾಮೇಳಾವ್‌ ನಡೆಸುವ ವಿಷಯವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಸ್ಥಳವನ್ನು ಶೀಘ್ರ ಅಂತಿಮಗೊಳಿಸುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.