ಬೆಳಗಾವಿ: ‘ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರ ತನ್ನ ಹಕ್ಕು ಮಂಡಿಸಿರುವ ಮತ್ತು ಮರಾಠಿ ಮಾತನಾಡುವ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕನ್ನಡ ಭಾಷೆ ಹೇರಿಕೆ ನಿಲ್ಲಿಸಬೇಕು’ ಎಂದು ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಪಾಲಿಕೆ ಸದಸ್ಯ ರವಿ ಸಾಳುಂಕೆ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
‘ಮರಾಠಿ ಮಾತನಾಡುವ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕನ್ನಡ ಭಾಷೆ ಹೇರಲಾಗಿದೆ. ಒಂದು ಕಾಲದಲ್ಲಿ ಎಂಇಎಸ್‌ನ ಹೆಮ್ಮೆಯ ಸಂಕೇತವಾಗಿದ್ದ ಬೆಳಗಾವಿ ಪಾಲಿಕೆ ಈಗ ತನ್ನೆಲ್ಲ ವ್ಯವಹಾರ ಕನ್ನಡದಲ್ಲೇ ನಿರ್ವಹಿಸುತ್ತಿದೆ. ಕನ್ನಡದಲ್ಲೇ ಎಲ್ಲ ದಾಖಲೆ ಕೊಡುತ್ತಿದೆ. ಮರಾಠಿಯಲ್ಲಿ ನಡಾವಳಿ ನೀಡುವಂತೆ ಕೇಳಿದ್ದಕ್ಕೆ ನನ್ನನ್ನು ಮತ್ತು ಎಂಇಎಸ್ ಬೆಂಬಲಿತ ಇತರೆ ಇಬ್ಬರು ಸದಸ್ಯರನ್ನು ಗಡೀಪಾರು ಮಾಡುವಂತೆ ಕನ್ನಡ ಸಂಘಟನೆಯವರು ಒತ್ತಾಯಿಸುತ್ತಿದ್ದಾರೆ’ ಎಂದರು.
‘ಮರಾಠಿ ಮಾತನಾಡುವ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕರ್ನಾಟಕ ಸರ್ಕಾರ ಪ್ರಶ್ನಿಸಲು ತಾವು ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.