ADVERTISEMENT

ಮಹಾವೀರ ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 10:30 IST
Last Updated 25 ಏಪ್ರಿಲ್ 2021, 10:30 IST
ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಫೋಟೊಗೆ ಪುಷ್ಪಾರ್ಚನೆ ಮಾಡಿದರು
ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಫೋಟೊಗೆ ಪುಷ್ಪಾರ್ಚನೆ ಮಾಡಿದರು   

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಗವಾನ್‌ ಮಹಾವೀರ ಜಯಂತಿಯನ್ನು ಸರಳವಾಗಿ ಭಾನುವಾರ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರು ಫೋಟೊಗೆ ಪುಷ್ಪಾರ್ಚನೆ ಮಾಡಿದರು. ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತು ಜೈನ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಮಠ ಬೀದಿಯಲ್ಲಿ ಜೈನ ಯುವ ವೇದಿಕೆ ವತಿಯಿಂದ ಜಯಂತಿ ಆಚರಣೆ ನಡೆಯಿತು. ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ್, ಮುಖಂಡ ಸಂಜಯ ಪಾಟೀಲ ಹಾಗೂ ಗಣ್ಯರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಾಲ ಮಹಾವೀರ ಮೂರ್ತಿಯನ್ನು ತೊಟ್ಟಿಲಲ್ಲಿ ತೂಗಿ ಶ್ರಾವಕಿಯರು ಸಂಭ್ರಮಿಸಿದರು.

ADVERTISEMENT

‘ಕೊರೊನಾ ಕಾರಣದಿಂದ ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಗಿದೆ. ಜಗತ್ತನ್ನು ಕೊರೊನಾದಿಂದ ಮುಕ್ತ ಮಾಡು ಎಂದು ಮಹಾವೀರನನ್ನು ಪ್ರಾರ್ಥಿಸಿದ್ದೇವೆ’ ಎಂದು ಸಮಾಜದ ಮುಖಂಡರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.