
ಗೋಕಾಕ: ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಇಲ್ಲಿಯ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ್ ಮೊಹನ ಭಸ್ಮೆ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಆಧರಿಸಿ, ಹೆಸರು , ಉದ್ದು ಮತ್ತು ಸೋಯಾಬಿನ್ ಖರೀದಿ ಕೇಂದ್ರವನ್ನು ಗೋಕಾಕ ತಾಲ್ಲೂಕಿನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿದೆ. ಆದರೆ ಮೆಕ್ಕೆಜೋಳದ ಯಾವುದೇ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರದ ಬಗ್ಗೆ ಮಾಹಿತಿ ನೀಡಿಲ್ಲ. ತಾಲ್ಲೂಕಿನಾದ್ಯಂತ ಶೇ 90ರಷ್ಟು ಮೆಕ್ಕೆಜೋಳ ಬೆಳೆಯುವ ರೈತರಿದ್ದು ಕೂಡಲೇ ಮೆಕ್ಕೆಜೋಳದ ಖರೀದಿ ಕೇಂದ್ರವನ್ನು ರೈತರ ಅನುಕೂಲಕ್ಕಾಗಿ ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರೈತ ಸಂಘಟನೆಗಳ ತಾಲ್ಲೂಕು ಘಟಕದ ಅಧ್ಯಕ್ಷ ಶಿದ್ದಲಿಂಗ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಕುಮಾರ ತಿಗಡಿ, ಮಾಯಪ್ಪ ಹೆಗಡೆ, ರಾಯಪ್ಪ ಗೌಡಪ್ಪನವರ, ಪ್ರಕಾಶ ಹುಲ್ಲನ್ನವರ, ಸತ್ತೆಪ್ಪ ಮಲ್ಲಾಪೂರ, ಲಾಲಸಾಬ ಶಿವಾಪೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.