ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು
ಎಂ.ಕೆ.ಹುಬ್ಬಳ್ಳಿ: ಸ್ಥಳೀಯ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ 15 ಸ್ಥಾನಗಳಿಗೆ ಸೆ.28ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ಕಾರ್ಖಾನೆಯ ಹೈಸ್ಕೂಲ್ ಆವರಣದಲ್ಲಿ ಮತದಾನ ನಡೆಯಲಿದೆ.
ಮತದಾನಕ್ಕೆ ಕಾರ್ಖಾನೆ ಗುರುತಿನ ಚೀಟಿ ಜೊತೆಗೆ ಆಧಾರ್ ಕಾರ್ಡ್, ವೋಟರ್ ಐಡಿ, ಪಾನ್ ಕಾರ್ಡ್, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಯಾವುದಾದರೂ ಒಂದನ್ನು ತರಬೇಕು ಎಂದು ಚುನಾವಣಾಧಿಕಾರಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪ್ರಭಾವತಿ ಫಕೀರಪುರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಟ್ಟು 16,903 ಸದಸ್ಯರಿಗೆ ಮತದಾನಕ್ಕೆ ಅವಕಾಶವಿದೆ. 44 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ. 34 ಮತಗಟ್ಟೆ ಮತ್ತು ಸ್ಲಿಪ್ ಕೌಂಟರ್‌ಗಳನ್ನು ನಿರ್ಮಿಸಲಾಗಿದ್ದು, 170 ಪೋಲಿಂಗ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಮತಎಣಿಕೆಗೆ 45 ಟೇಬಲ್ ಹಾಕಲಾಗಿದ್ದು, ಒಟ್ಟು 225 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ’ ಎಂದರು.
ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ, ಕಿತ್ತೂರು ಪ್ರಾಧಿಕಾರ ಆಯುಕ್ತರ ಕಚೇರಿ ಅಧಿಕಾರಿ ಮಂಜುನಾಥ ಅಂಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.