ADVERTISEMENT

ಬೆಳಗಾವಿಯಲ್ಲಿ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ!

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 10:36 IST
Last Updated 23 ಅಕ್ಟೋಬರ್ 2021, 10:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಮಾಜಿ ಯೋಧರೊಬ್ಬರುತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಆ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11) ಮತ್ತು ಸೃಜನ್ ಹಾದಿಮನಿ (8) ಮೃತರು.

ಗೋಪಾಲ್‌ ಅವರ ಪತ್ನಿ ಜಯಾ ಕಪ್ಪು ಶಿಲೀಂಧ್ರ ಸೋಂಕಿನಿಂದ ಜುಲೈ‌ 6ರಂದುಮೃತರಾಗಿದ್ದರು. ಇದರಿಂದ ಗೋಪಾಲ್ ನೊಂದಿದ್ದರು ಎನ್ನಲಾಗುತ್ತಿದೆ.ಮನೆಯಲ್ಲಿ ವಿಷ ಸೇವಿಸಿ ಮಕ್ಕಳಿಗೂ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ADVERTISEMENT

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಗೋಪಾಲ ಹಾದಿಮನಿನಿವೃತ್ತ ಯೋಧ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.